ಹಾಸನ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾಂತರಾಜ್

ಹಾಸನ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾಂತರಾಜ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕಾಂತರಾಜ್ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾಧಿಕಾರಿ ಆರ್.ಗಿರೀಶ್ ಅಧಿಕಾರ ಹಸ್ತಾಂತರಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಕಾಂತರಾಜ್, 'ಹಾಸನ ರಾಜ್ಯದಲ್ಲಿ ಉತ್ತಮ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ದೊರೆತಿರುವುದು ಸಂತೋಷವಾಗಿದೆ. ಹಲವಾರು ಇಲಾಖೆಗಳ ಮೂಲಕ ಅಭಿವೃದ್ಧಿ ಕೆಲಸ ಮಾಡಲು ಉತ್ತಮ ಅವಕಾಶ ದೊರೆತಿದೆ' ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ನಾಗರಾಜ್, ಉಪ ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

Post a Comment

Previous Post Next Post