ನವದೆಹಲಿ: ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿಗೆ ತೀರ್ಮಾನಿಸಿ ಆದೇಶ ಹೊರಡಿಸಿದೆ. ಅದರಂತೆ ನಾಳೆಯಿಂದ ರಾಜ್ಯಾದ್ಯಂತ ಬಿಗಿ ನಿಯಮ ಜಾರಿಯಲ್ಲಿ ಇರಲಿದೆ.
ಎಲ್ಲಾ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಪಾರ್ಲರ್ಸ್, ಸಲೂನ್ಸ್, ಸ್ಪಾಸ್, ಝೂ, ಮನರಂಜನೆಯ ಪಾರ್ಕ್ಗಳನ್ನ ನಾಳೆಯಿಂದ ಸಂಪೂರ್ಣ ಬಂದ್ ಮಾಡುವಂತೆ ಆದೇಶ ನೀಡಲಾಗಿದೆ. ಮುಂದಿನ ಆದೇಶದವರೆಗೂ ಈ ನಿಯಮ ಜಾರಿಯಲ್ಲಿ ಇರಲಿದೆ.
ಇನ್ನು ಮಾಲ್ಸ್, ಆಫೀಸಸ್, ರೆಸ್ಟೊರೆಂಟ್ಸ್, ಸಿನಿಮಾ ಹಾಲ್ಸ್ಗೆ ಶೇಕಡಾ 50 ರಷ್ಟು ಅಕ್ಯುಪೆನ್ಸಿಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇಕಡಾ 50 ರಷ್ಟು ಅಕ್ಯುಪೆನ್ಸಿ ಆಧಾರದ ಮೇಲೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಅಗತ್ಯ ಸೇವೆಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಅವು ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿಗಳನ್ನ ತೆರೆಯಲು ಸೂಚಿಸಲಾಗಿದೆ.