ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ ನಗರ ಸಭಾ ವ್ಯಾಪ್ತಿಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯನಗರ ಜೀವನೋಪಾಯ ಅಭಿಯಾನ (ಡೇ ನಲ್ಫ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ, ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ಮೂರು (3) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಒಂದು ವರ್ಷದ ಅವಧಿಗೆ ಅರ್ಹ ಪ್ರದೇಶ ಮಟ್ಟದ ಒಕ್ಕೂಟ, ಸ್ವ-ಸಹಾಯ ಸಂಘಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 
18 ರಿಂದ 45 ವರ್ಷ, ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣ, ಕಂಪ್ಯೂಟರ್ ಸರ್ಟಿಫೀಕೇಟ್, ಹಾಗೂ ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಸ್ವ-ಸಹಾಯ ಸಂಘ ಮತ್ತು ಪ್ರದೇಶ ಮಟ್ಟದ ಒಕ್ಕೂಟದಲ್ಲಿ ಕನಿಷ್ಠ 3 ವರ್ಷಗಳ ಅವಧಿಗೆ ಸದಸ್ಯರಾಗಿ ರಬೇಕು, ಸ್ವ-ಸಹಾಯ ಸಂಘವು ಚಾಲ್ತಿಯಲ್ಲಿರಬೇಕು, ಯಾವುದೇ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರ ಬಾರದು, ಹಾಸನ ನಗರ ಸಭಾ ವ್ಯಾಪ್ತಿಯಲ್ಲಿ ವಾಸವಿರತಕ್ಕ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಆಸಕ್ತ ಅಭ್ಯರ್ಥಿಗಳು ಫೆ. 21ರ ಒಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಹಾಸನ ನಗರ ಸಭೆಯ ಡೇ-ನಲ್ಮಶಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ ಶಾಖೆಯನ್ನು ಸಂಪರ್ಕಿಸ ಬಹುದಾಗದೆ.

Post a Comment

Previous Post Next Post