ಬೇಲೂರು :
ರಾಜ್ಯ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ ಒಕ್ಕಲಿಗ ಹಾಗೂ ವೀರಶೈವ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ತಲಾ ೧೦೦ ಕೋಟಿ ರೂ. ಮೀಸಲಿಟ್ಟಿರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕೋಶಾಧ್ಯಕ್ಷೆ ಸುರಭಿರಘು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯದ ಜನರ ಹಿತದೃಷ್ಠಿಯಿಂದ ಬಜೆಟ್ ಮಂಡನೆ ಮಾಡಿದೆ. ಅದರಲ್ಲೂ ರಾಜ್ಯ ಒಕ್ಕಲಿಗ ಸಮಾಜಕ್ಕೆ ಹಾಗೂ ವೀರಶೈವ ಸಮಾಜಕ್ಕೆ ಅನುಕೂಲ ಆಗುವಂತೆ ಸಮಾಜದ ಅಭಿವೃದ್ಧಿ ನಿಗಮಕ್ಕೆ ಹಣ ಮೀಸಲಿಟ್ಟಿರುವುದು ಭವಿಷ್ಯದಲ್ಲಿ ಉತ್ತಮ ಬೆಳವಣಿಗೆಯಾಗಿದ್ದು ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ರಾಜ್ಯದ ಎಲ್ಲಾ ಸಮುದಾಯದ ಪರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.