ಆಜಾನ್ ವಿಚಾರದಲ್ಲಿ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಗೊಂದಲ ಸೃಷ್ಟಿಸುವುದು ಬೇಡ: ಸಿಎಂ

 ಬೆಂಗಳೂರು: ಆಜಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾ ನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

 ಯಾವುದೇ ಸಂಘಟನೆಯಾ ಗಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ, ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದು ಬೆಂಗಳೂರಿನಲ್ಲಿಂದು ಸುದ್ದಿ ಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈಗ ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರಗಳ ಬಗ್ಗೆ ನಡೆಯುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇವೆಲ್ಲಾ ಹೊಸ ವಿಚಾರಗಳೇನು ಅಲ್ಲ, ಹಲವಾರು ವರ್ಷಗಳಿಂದ ಇವೆ. ಕೆಲವು ಆದೇಶಗಳು ೨೦೦೧, ೨೦೦೨, ಹೈಕೋರ್ಟ್ ತೀರ್ಪು ಆಧಾರದ ಮೇಲೆ ಮಾಡಿದ್ದೇವೆ. ನಾವು ಇಂದಿನ ಬಿಜೆಪಿ ಸರ್ಕಾರ ಹೊಸ ಆದೇಶವನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಧರ್ಮವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಮಾಜವಾಗಲಿ, ಯಾವುದೇ ಸಂಘಟನೆಯಾಗಲಿ ಕಾನೂನು ಕೈಗೆತ್ತಿಕೊಳ್ಳದೆ ಕಾನೂ ನು ಸುವ್ಯವಸ್ಥೆಗೆ ಕ್ರಮ ಕೈಗೊ ಳ್ಳುತ್ತೇವೆ. ದೇವಸ್ಥಾನ, ಮಸೀದಿ ಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ಆದೇಶವಿದೆ, ಎಷ್ಟು ಡೆಸಿಮಲ್ ವರೆಗೆ ಬಳಸಬೇಕು ಹಿಂದಿನ ಆದೇಶವಿದ್ದು, ಅದನ್ನು ಹಂತಹಂತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೆ ತರುವ ಕೆಲಸ ನಡೆಯುತ್ತಿದೆ ಎಂದರು.

ಸಂಪುಟ ವಿಸ್ತರಣೆಗೆ ಸೂಚನೆ ಬಂದಿಲ್ಲ:ನನಗೆ ಇದುವರೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರಿಂದ ಸೂಚನೆ ಬಂದಿಲ್ಲ. ನಾಳೆ ದೆಹಲಿಗೆ ಹೋದಾಗ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಭೇಟಿಯಾದಾಗ ಸೂಚನೆ ಬರಬಹುದು ಎಂಬ ನಿರೀಕ್ಷೆಯಿದೆ ಎಂದರು. 

 ನಾಳೆ ಬೆಳಗ್ಗೆ ಜಿಎಸ್ ಟಿ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್, ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಗೆ ಸೇರ್ಪಡೆ ಮಾಡುವ ಬಗ್ಗೆ ರಕ್ಷಣಾ ಸಚಿವರ ಜೊತೆ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಕೇಂದ್ರ ಇಂಧನ ಖಾತೆ ಸಚಿವರನ್ನು ಕೂಡ ಭೇಟಿ ಮಾಡಲಿದ್ದೇನೆ ಎಂದರು.

ಹೆಚ್ ಡಿ ಕುಮಾರ ಸ್ವಾಮಿಯವರ ಆಧಾರರಹಿತ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಬಿಜೆಪಿ ರಾಷ್ಟ್ರೀಯ ಪಕ್ಷ, ತತ್ವ ಆದರ್ಶಗಳನ್ನು ಇಟ್ಟುಕೊಂಡು ಆಡಳಿತ ನಡೆಸುತ್ತಿರುವ ಪಕ್ಷವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ ಎಂದರು.

 ಇಡೀ ಜಗತ್ತಿನ ಜನರು ಬಂದು ವ್ಯಾಪಾರ,ವಹಿವಾಟು ಮಾಡುವ ಬೆಂಗಳೂರು, ಕರ್ನಾ ಟಕಕ್ಕೂ ತೆಲಂಗಾಣ ರಾಜ್ಯಕ್ಕೂ ಅಲ್ಲಿನ ಐಟಿ-ಬಿಟಿ ಸಚಿವರು ಹೋಲಿಕೆ ಮಾಡುವುದು ಅತ್ಯಂತ ಹಾಸ್ಯಾಸ್ಪದ ಎಂದು ಕೂಡ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Post a Comment

Previous Post Next Post