ಅಪೌಷ್ಠಿಕತೆ-ಗರ್ಭಿಣಿ-ಬಾಣಂತಿಯರಿಗೆ ಆರೋಗ್ಯ ತಪಾಸಣೆ ಶಿಬಿರ

ಬೇಲೂರು : ತಾಲ್ಲೂಕಿನ ನಾಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಪೌಷ್ಠಿಕ ಮಕ್ಕಳಿಗೆ ಮತ್ತು ಗರ್ಭಿಣಿ ಮಹಿಳೆಯರಿಗೆ ಹಾಗೂ ಬಾಣಂತಿಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.

ಬೇಲೂರು ತಾಲ್ಲೂಕು ನಾಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಪೌಷ್ಠಿಕ ಮಕ್ಕಳಿಗೆ ಮತ್ತು ಗರ್ಭಿಣಿ ಮಹಿಳೆಯರಿಗೆ ಹಾಗೂ ಬಾಣಂತಿಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಲಾಯಿತು

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತವಾಗಿ ಏರ್ಪಡಿಸಿದ್ದ ಶಿಬಿರದಲ್ಲಿ ಮಾತನಾಡಿದ ಪ್ರಸೂತಿ ತಜ್ಞರಾದ ಡಾ.ಕಿರಣ್ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿ ಮದುವೆ ಆಗುವುದು ಸರಿಯಲ್ಲ. ಶೀಘ್ರ ಗರ್ಭಿಣಿ ಆಗುವುದನ್ನು ತಡೆಯಬೇಕು. ಒಂದು ಮಗುವಿಗೂ ಇನ್ನೊಂದು ಮಗುವಿಗೂ ೩ ವರ್ಷದ ಅಂತರವಿರಬೇಕು. ಗರ್ಭಿಣಿ ಆಗಿದ್ದಾಗ ಪೌಷ್ಠಿಕ ಆಹಾರ ಸೇವನೆ ಅತಗತ್ಯ. ಕುಟುಂಬ ಕಲ್ಯಾಣ ಯೋಜನೆ ಅಳವಡಿಕೆ ತುಂಬಾ ಮುಖ್ಯವಾಗಿದೆ. ಗರ್ಭಿಣಿಯರಿಗೆ ಸೂಕ್ತ ಸಮಯದಲ್ಲಿನ ಚಿಕಿತ್ಸೆ ಹಾಗೂ ಆರೋಗ್ಯ ಶಿಕ್ಷಣ ನೀಡುವ ಬಗ್ಗೆ ಮಾಹಿತಿ ನೀಡಿದರು.

ಮಕ್ಕಳ ತಜ್ಞ ವೈದ್ಯರಾದ ರಾಘವೇಂದ್ರ ಮಾತನಾಡಿ, ಮಕ್ಕಳ ಲಾಲನೆ, ಪಾಲನೆ ಹಾಗೂ ಅಪೌಷ್ಠಿಕತೆ ಉಳ್ಳಂತ ಮಕ್ಕಳನ್ನು ಗುರುತಿಸಿ ಎನ್‌ಆರ್‌ಸಿ ಕೇಂದ್ರಕ್ಕೆ ಸೇರಿಸುವಂತೆ ಸಲಹೆ ನೀಡಿದರು. ಹದಿಹರೆಯದ ಮಕ್ಕಳ ಬೆಳವಣಿಗೆ, ಕಾಲಕಾಲಕ್ಕೆ ಮಕ್ಕಳಿಗೆ ಲಸಿಕೆ ಹಾಕುವುದು, ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸುವ ಬಗ್ಗೆ ಹಾಗೂ ಎದೆಹಾಲಿನ ಮಹತ್ವ ಕುರಿತು ತಿಳಿಸಿದರು. ಕಾರ್ಯಕ್ರಮವನ್ನು ನಾ.ಪ್ರಾ.ಆರೋಗ್ರ ಕೇಂದ್ರದ ಡಾ.ಚೈತ್ರಶ್ರೀ ಉದ್ಘಾಟಿಸಿ ಪ್ರಾಸ್ಥವಿಕವಾಗಿ ಮಾತನಾಡಿದರು.

ಈ ಸಂದರ್ಭ ಡಾ.ಅಲಸೆ, ಡಾ.ಮಹಂತೇಶ್, ಡಾ.ಅನುಷಾ, ಆರ್‌ಬಿಎಸ್‌ಕೆ ತಂಡ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಇತರರು ಇದ್ದರು.


Post a Comment

Previous Post Next Post