ಬೇಲೂರು : ಚಿಕ್ಕಮಗಳೂರು, ಮೂಡಿಗೆರೆ, ಬೇಲೂರು ತಾಲೂಕಿನಲ್ಲಿ ಅತಿಯಾದ ಮಳೆ ಸುರಿಯುತ್ತಿದ್ದು
![]() | |
|
ಬೇಲೂರಿನ ಯಗಚಿ ಜಲಾಶಯ ಬಹುತೇಕ ಭರ್ತಿಯಾಗುತ್ತಿದ್ದು , ಡ್ಯಾಂಗೆ ಸದ್ಯ 800 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಇದೇ ರೀತಿ ಜಲಾಶಯಕ್ಕೆ ಒಳಹರಿವಿನಲ್ಲಿ ಹೆಚ್ಚಳವಾದರೆ ನದಿಗೆ ಗುರುವಾರ ನೀರು ಬಿಡುಗಡೆ ಮಾಡಲಾಗುತ್ತದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 3164.900 ಅಡಿಗಳಷ್ಟು ಇದ್ದು ಇದೆ ರೀತಿಯಲ್ಲಿ ಗುರುವಾರ ಮಳೆ ಸುರಿದರೆ ಡ್ಯಾಂ ಸಂಪೂರ್ಣ ಭರ್ತಿಯಾಗುತ್ತದೆ.
ಜಲಾಶಯದ ನೀರಿನ ಸಂಗ್ರಹ ಸಾಮಥ್ರ್ಯ 3.603 ಟಿಎಂಸಿ ಇದ್ದು ಇಂದು 3.31 ಟಿಎಂಸಿ ಸಂಗ್ರಹವಿದೆ. ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾದರೆ ನೀರು ಹೊರ ಬಿಡುವ ಸಾಧ್ಯತೆ ಇರುವ ಕಾರಣ ಅಣೆಕಟ್ಟೆಯ ಅಚ್ಚುಕಟ್ಟು ಪ್ರದೇಶ ಹಾಗೂ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಯಗಚಿ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಟಿ.ದಿನೇಶ್ ಸೂಚನೆ ಹೊರಡಿಸಿದ್ದಾರೆ.
ಯಗಚಿ ಜಲಾಶಯದ ಸಹಾಯಕ ಕಾರ್ಯಪಾಲಕ ಶಿವಕುಮಾರ್ ಇದ್ದರು.
![]() |
Ads |
![]() |
Ads |