ಟಿಕಾಯತ್ಗೆ ಮಸಿ ಎರಚಿದವರ ಗಡಿಪಾರಿಗೆ ಆಗ್ರಹ

ಹಾಸನ: ರೈತಸಂಘದ ರಾಷ್ಟ್ರೀಯ ಅಧ್ಯಕ್ಷ ರಾಕೇಶ್ ಟಿಕಾಯತ್ ಅವರು ಮಾಧ್ಯಮಗಳಿಗೆ ಹೇಳಿಕೆ ಕೊಡುವಾಗ ಪತ್ರಕರ್ತರ ವೇಷದಲ್ಲಿ ಬಂದು ಕಪ್ಪುಮಸಿ ಎರಚಿದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕಣಗಾಲ್ ಮೂರ್ತಿ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
 ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಅವರು, ಬೆಂಗಳೂರಿನ ಗಾಂಧಿ ಭವನದಲ್ಲಿ ರೈತಸಂಘದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ನಂದಿನಿ ಜಯರಾಂ, ರಾಜ್ಯ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಗಂಗಾಧರ್ ಮತ್ತಿತರರು ಮಾಧ್ಯಮಕ್ಕೆ ಹೇಳಿಕೆ ಕೊಡುತ್ತಿರುವಾಗ ಕೆಲ ವ್ಯಕ್ತಿಗಳು ಪತ್ರಕರ್ತರ ಸೋಗಿನಲ್ಲಿ ಬಂದು ಕಪ್ಪು ಮಸಿ ಎರಚಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಅವರನ್ನು ರೈತರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದೇವೆ. ಇಂತಹವರನ್ನು ಕೂಡಲೇ ಗೂಂಡಾ ಕಾಯ್ದೆ ಅಡಿ ಬಂಧಿಸಿ ಗಡಿಪಾರು ಮಾಡಿ ಇವರ ಕೃತ್ಯಕ್ಕೆ ಬೆಂಬಲ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 
 ಪ್ರತಿಭಟನೆಯಲ್ಲಿ ಹೆಚ್.ಕೆ. ಶಂಕರ್, ಹನುಮಂತೇಗೌಡ, ಲಕ್ಷö್ಮಣ್, ರಾಮಚಂದ್ರ, ಪುಟ್ಟೇಗೌಡ, ಈರೇಗೌಡ ಇತರರು ಉಪಸ್ಥಿತರಿದ್ದರು.

Post a Comment

Previous Post Next Post