ಬೆಂಗಳೂರು(ಮೇ.17): ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು(Rain), ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್(Red Alert) ಘೋಷಿಸಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ(Karnataka) ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ(Department of Meteorology) ತಜ್ಞ ಪ್ರಸಾದ್ ಹೇಳಿದ್ದಾರೆ.
![]() |
NDRK COLLEGE |
![]() |
Advertisement |
ಯೆಲ್ಲೋ ಅಲರ್ಟ್:
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.