ಅರಸೀಕೆರೆ :-ಪದವೀಧರರ ಸಮಸ್ಯೆ ಬಗೆಹರಿಸಲು ನಮ್ಮ ಪಕ್ಷ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಅವರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ಈ ಬಾರಿಯ ಪಕ್ಷದ ಅಭ್ಯರ್ಥಿ ರಾಮು ಗೆದ್ದೇ ಗೆಲ್ಲುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಅರಸೀಕೆರೆ ತಾಲೂಕು ಜಾತ್ಯಾತೀತ ಜನತಾದಳ ನಗರದ ಸಮೀಪವಿರುವ ಹಳ್ಳಿ ಮನೆಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ರಾಮು ಜನಪರ ಹೋರಾಟಗಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾಗಿದ್ದವರು. ಅವರಿಗೆ ಸಿಕ್ಕ ಆಡಳಿತದ ಅವಽಯಲ್ಲಿ ಉತ್ತಮ ಜನಪರ ಕೆಲಸ ಮಾಡಿದ್ದಾರೆ. ಹಾಗಾಗಿ ಅತ್ಯಂತ ಬಹುಮತದಿಂದ ಚುನಾಯಿಸಿ ವಿಧಾನಪರಿಷತ್ತಿಗೆ ಕಳಿಸಬೇಕೆಂದು ಕಾರ್ಯಕರ್ತರಲ್ಲಿ ಕರೆನೀಡಿದರು.
ಪದವೀಧರರ ಸಮಸ್ಯೆಯನ್ನು ಬಗೆಹರಿಸಲು ನಮ್ಮಪಕ್ಷ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಜಿಲ್ಲೆಯಲ್ಲಿ ಪದವೀಧರರ ವಿಶ್ವಾಸವನ್ನು ಗಳಿಸಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಾಗಲೇ ಮತದಾರರನ್ನು ಭೇಟಿ ಮಾಡಿ ಸಂಪರ್ಕಿಸಿದ್ದು, ಉತ್ತಮ ಬೆಂಬಲ ವ್ಯಕ್ತವಾಗಿದೆ ಈ ಚುನಾವಣೆಯಲ್ಲಿ ಜಯ ನಮ್ಮ ಪಕ್ಷದ್ದೇ ಆಗಿರಬೇಕಾದರೇ ಎಲ್ಲರೂ ಮತದಾರರನ್ನು ಮತ್ತೊಮ್ಮೆ ಭೇಟಿ ಮಾಡಿ ಮತಯಾಚಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಬಿಳಿ ಚೌಡಯ್ಯ ಮಾತನಾಡಿ ಶಿಕ್ಷಣ ಕ್ಷೇತ್ರಕ್ಕೆ ಜೆಡಿಎಸ್ ಅಽಕಾರದಲ್ಲಿದ್ದಾಗ ಹೆಚ್ಚಿನ ಮಹತ್ವ ನೀಡಿದೆ .ಅರಸೀಕೆರೆ ಹಾಗೂ ಬಾಣಾವರಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆರೆದಿರುವುದು ಸೇರಿದಂತೆ ಹಾಸನ ಜಿಲ್ಲೆಯಲ್ಲಿ ಅತೀ ಹೆಚ್ಚು ಪದವೀ ಕಾಲೇಜುಗಳನ್ನು ಆರಂಭಿಸಲಾಗಿದೆ ಶಿಕ್ಷಣದ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರು ಪದವಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ಜಿಲ್ಲೆಯಲ್ಲಿ ಮಂಜುರು ಮಾಡಿಸಿದ್ದಾರೆ ಈ ಭಾರಿ ಜೆಡಿಎಸ್ ಅಭ್ಯರ್ಥಿ ರಾಮು ಅತೀ ಹೆಚ್ಚಿನ ಮತಗಳಿಂದ ಚುನಾಯಿತರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಲ್ಲಿ ಇದ್ದಾರೆ. ಮತದಾರರನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿದ್ದೇವೆ ಎಂದರು
ಜೆಡಿಎಸ್ ಯುವ ಮುಖಂಡ ಹೊಸೂರು ಗಂಗಾಧರ್ ಅವರು ಮಾತನಾಡಿ ತಾಲೂಕಿನಲ್ಲಿ ಪದವೀಧರ ಮತದಾರರು ನಮ್ಮ ಪಕ್ಷದ ಅಭ್ಯರ್ಥಿ ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿದ್ದು ಹೆಚ್.ಕೆ ರಾಮು ಅವರಿಗೆ ಪದವೀಧರರು ಹಾಗೂ ಸರ್ಕಾರಿ ನೌಕರರ ಸಂಕಷ್ಟಗಳ ಅರಿವಿದ್ದು ಅರೇ ಕಾಲಿಕ ಉಪನ್ಯಾಸಕರನ್ನು ಖಾಯಂ ಗೊಳಿಸುವಂತೆ ಸರ್ಕಾರದ ಗಮನ ಸೆಳೆಯಲು ತಮ್ಮ ಮತವನ್ನು ಹೆಚ್.ಕೆ ರಾಮು ಅವರಿಗೆ ನೀಡಬೇಕು ಎಂದು ಮನವಿ ಮಾಡಿದರು.