ಹಾಸನ ಜಿಲ್ಲೆಯ ಹಲವೆಡೆ ಇಂದು ಮುಂಜಾನೆ ಭೂಕಂಪನ

ಹಾಸನ : ಹಾಸನ ಜಿಲ್ಲೆಯ ಹಲವೆಡೆ ಇಂದು ಮುಂಜಾನೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

ಅರಕಲಗೊಡು ತಾಲೂಕಿನ ಹನೆಮಾರನಹಳ್ಳಿ, ಕಾರಹಳ್ಳಿ, ಮುದ್ದೆನಹಳ್ಳಿಯಲ್ಲಿ ಮುಂಜಾನೆ 4.38 ರ ಸುಮಾರಿಗೆ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಇಂದು ಮುಂಜಾನೆ 4.38 ರ ಸುಮಾರಿಗೆ ಅರಕಲಗೂಡ ತಾಲೂಕಿನ ಹನೆಮಾರನಹಳ್ಳಿ, ಕಾರಹಳಳಿ, ಮುದ್ದೆನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿಯಿಂದ ಭಾರೀ ಶಬ್ಧ ಕೇಳಿ ಬಂದಿದ್ದು, ಬಳಿಕ ಭೂಮಿ ಕಂಪಿಸಿರುವ ಅನುಭವವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Post a Comment

Previous Post Next Post