ಹಾಸನ :ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನಗರದ ಚಿಕ್ಕನಾಳು ಟಿಪ್ಪು ಸರ್ಕಲ್ ಬಳಿ ನೂರಾರು ಸಂಖ್ಯೆಯ ಮುಸಲ್ಮಾನರು ಬಿಜೆಪಿ ವಕ್ತಾರೆ ನಿಪೂರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಮುಸಲ್ಮಾನ್ ಮುಖಂಡ ಸೈಯದ್ ಖದೀರ್ ಮಾತನಾಡಿ, ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆ ಖಂಡನೀಯ, ಇಂತಹ ಹೇಳಿಕೆ ನೀಡಿ ಧಾರ್ಮಿಕ ವಿಚಾರಗಳಲ್ಲಿ ರಾಜಕೀಯ ಮಾಡುವ ನೂಪುರ್ ಶರ್ಮಾ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಪಕ್ಷದ ಶಾಸಕ, ಸಚಿವರು ಸೇರಿದಂತೆ ಅನೇಕರು ಮುಸಲ್ಮಾನರು ಹಾಗೂ ಅವರ ಧಾರ್ಮಿಕ ವಿಚಾರಗಳಲ್ಲಿ ಆಟ ಆಡುತ್ತಿದ್ದಾರೆ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಜಾಬ್, ಹಲಾಲ್, ಆಜಾನ್ ಸೇರಿದಂತೆ ಮುಸಲ್ಮಾನರನ್ನು ಗುರಿಯಾಗಿಸಿ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ,ಇದಕ್ಕೆ ಪೂರಕವಾಗಿ ಬಿಜೆಪಿ ವಕ್ತಾರೆ ಯೋಬ್ಬರ ಹೇಳಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ತಲೆ ತಗ್ಗಿಸುವಂತಾಗಿದೆ ಕೂಡಲೇ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ಪದಾಧಿಕಾರಿಗಳು ದೇಶದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ನೂಪುರ್ ಶರ್ಮಾ ಅವರ ಹೇಳಿಕೆಯಿಂದ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟಾಗಿದೆ, ಕೂಡಲೇ ಬಿಜೆಪಿ ಸರ್ಕಾರ ತಮ್ಮ ಕಾರ್ಯಕರ್ತರು ಹಾಗೂ ನಾಯಕರ ನಾಲಿಗೆಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವಂತೆ ಸೂಚನೆ ನೀಡಬೇಕು, ಮುಂದಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದರು
ಪ್ರಪಂಚದಲ್ಲಿ ಬಹುದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರವಾಗಿರುವ ಭಾರತ ದೇಶದಲ್ಲಿ ಸರ್ವ ಧರ್ಮಗಳು ಸಾಮರಸ್ಯ ಜೀವನ ನಡೆಸುತ್ತಿರುವ ಸಂಧರ್ಭದಲ್ಲಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಸರಕಾರ ಮಾಡುತ್ತಿದೆ ಎಂದು ದೂರಿದರು
ಪ್ರತಿಭಟನೆಯಲ್ಲಿ ನಾಸಿರ್ ಹುಸೇನ್, ಅಬ್ದುಲ್ ರೆಹಮಾನ್, ಸಿರಾಜ್,ಸಬೀರ್,ಇಮ್ರಾನ್, ಜಾಫರ್, ವಾಹಿದ್, ಆಫ್ರಿದ್, ಸಲೀಮ್ ಸೇರಿದಂತೆ ಇತರರು ಇದ್ದರು
Tags
ಹಾಸನ