ತಾಲ್ಲೂಕಿನ ಜನರ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರರುಣಿ : ಶ್ರೀಧರ್ ಗೌಡ

 ಅರಕಲಗೂಡು :-ತಾಲ್ಲೂಕಿನ ಜನರ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರ ಋಣಿಯಾಗಿರುತ್ತೇನೆ ಎಂದು ಸಮಾಜ ಸೇವಕರು ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರಾದ ಶ್ರೀಧರ್ ಹೇಳಿದ್ದಾರೆ .
ಇತ್ತೀಚೆಗೆ ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದಲ್ಲಿ  ಮಾರಿಕಾಂಬಾ ಜಾತ್ರಾ ಮಹೋತ್ಸವದಂಗವಾಗಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಧರ್ಭದಲ್ಲಿ ಮಾತನಾಡಿದ ಅವರು ತಾಲ್ಲೂಕಿನ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ಯುವಕರು ಅಣ್ಣಂದಿರು ತಮ್ಮಂದಿರು ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದರು .ಇದೇ ಸಂದರ್ಭದಲ್ಲಿ ತ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಾ ಎಚ್  ಎಲ್ ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿ  ಅವರು ಕುಶಲೋಪರಿಯನ್ನು ವಿಚಾರಿಸಿದರು.ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶ್ರೀಧರ್ ಗೌಡ ಅವರನ್ನು ಸಮ್ಮಾನಿಸಲಾಯಿತು .

ಈ ಸಂಧರ್ಬದಲ್ಲಿ ಮಲ್ಲಿಪಟ್ಟಣ ಗ್ರಾಪಂ ಅಧ್ಯಕ್ಷರಾದ ಎಂ ಆರ್ ರಂಗಸ್ವಾಮಿ ,ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ದೇವರಾಜೇಗೌಡ ,ಮುಖಂಡರಾದ ವೆಂಕಟೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು .

Post a Comment

Previous Post Next Post