ಅರಕಲಗೂಡು ತಾಲೂಕಿನ ವಡ್ಡರಹಳ್ಳಿ ಕಾಲುವೆ ಏರಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರವಿ ಎಂಬುವವರಿಗೆ ಟ್ರ್ಯಾಕ್ಟರ್ ಚಾಲಕ ತನ್ನ ವಾಹನವನ್ನು ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದು ಪರಿಣಾಮ ಗಂಭೀರ ಗಾಯಗೊಂಡಿರುವ ರವಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ . ಇನ್ನು ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ .