ಗಂಡಸಿ ದೊಡ್ಡಕೆರೆ ಏರಿ ಬಿರುಕು ಗ್ರಾಮಸ್ಥರು ಹಾಗೂ ಕೃಷಿಕರು ಆತಂಕ

ತಾಲೂಕಿನ ಗಂಡಸಿ ದೊಡ್ಡಕೆರೆ ಏರಿ ಯಾವುದೇ ಕ್ಷಣದಲ್ಲಾದರೂ ಕುಸಿಯುವ ಹಂತದಲ್ಲಿದ್ದು ಈ ಭಾಗದ ಗ್ರಾಮಸ್ಥರು ಹಾಗೂ ಕೃಷಿಕರ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಖಾಲಿ ಇದ್ದ ಕೆರೆ ಕಳೆದ ಆರು ತಿಂಗಳ ಹಿಂದೆ ಗಂಡಸಿ ಹಾಗೂ ಸುತ್ತಮುತ್ತಲ ಭಾಗದಲ್ಲಿ ಉತ್ತಮ ಮಳೆಯಾಗಿದ್ದರಿಂದ ಕೆರೆಯಲ್ಲಿ ನೀರು ತುಂಬಿತ್ತು ಆ ಸಂದರ್ಭದಲ್ಲಿ ಕೆರೆಯ ಏರಿ ಮೇಲೆ ಹಾದುಹೋಗಿರುವ ರಸ್ತೆ ಉದ್ದಕ್ಕೂ ಬಿರುಕು ಕಾಣಿಸಿಕೊಂಡಿದ್ದರಿಂದ ಸುದ್ದಿ ತಿಳಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಏರಿ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.



ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಕೆರೆ ಏರಿಯ ದುರಸ್ತಿಗೆ ಕ್ರಮಕೈಗೊಳ್ಳುವುದಿರಲಿ ಇತ್ತ ತಿರುಗಿಯೂ ನೋಡಿಲ್ಲ ಎಂಬ ಆರೋಪ ಗ್ರಾಮಸ್ಥರದ್ದು ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಕೆರೆ ಏರಿ ಒಡೆಯುವ ಆತಂಕ ಈಗ ಗ್ರಾಮಸ್ಥರನ್ನು ಕಾಡತೊಡಗಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಏರಿ ದುರಸ್ತಿಗೆ ಮುಂದಾಗದೆ ಹೋದರೆ ಭಾರಿ ಅನಾಹುತ ಒಂದಕ್ಕೆ ಅಧಿಕಾರಿಗಳೇ ಕಾರಣರಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ ಗ್ರಾಮದ ಸಂಜೀವ. ಈ ಕುರಿತು ಸುದ್ದಿಗಾರರೊಂದಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ ಕೆರೆಏರಿಯು ಅಪಾಯದ ಅಂಚಿನಲ್ಲಿದ್ದು ದುರಸ್ತಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟಿದ್ದರು ಅಧಿಕಾರಿಗಳ ನಿರ್ಲಕ್ಷ ಮನೋಭಾವ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Post a Comment

Previous Post Next Post