ಆಲೂರು : ನಿರುದ್ಯೋಗಿ ಪದವೀಧರ ಶಿಕ್ಷಕರು, ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಕೆ ರಾಮು ರವರಿಗೆ ತಾಲೂಕಿನ ಪದವೀಧರ ಮತದಾರರು ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡುವಂತೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಮನವಿ ಮಾಡಿಕೊಂಡರು
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ, ತಾಲೂಕು ಕಚೇರಿ, ಪದವಿ ಕಾಲೇಜು, ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ನಂತರ ಮಾತನಾಡಿದ ಅವರು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಯುವಶಕ್ತಿಯ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಅದರಲ್ಲೂ ಪದವಿ ಪಡೆದು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿರುವ ಯುವಕರ ಸಂಖ್ಯೆ ಹೆಚ್ಚಾಗಿರುವುದು ದೇಶದ ಅಭಿವೃದ್ಧಿ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ. ಸರ್ಕಾರವು ಯುವಕರಿಗೆ ಮತ್ತು ಪದವೀಧರರಿಗೆ ಉದ್ಯೋಗವನ್ನು ಸೃಷ್ಟಿ ಮಾಡುವ ಪ್ರಯತ್ನವನ್ನು ಮಾಡಿಲ್ಲ ಅಲ್ಲದೆ ಶಿಕ್ಷಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿಲ್ಲ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಕೂಡ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಪದವೀಧರ ಶಿಕ್ಷಕರ ಹಾಗೂ ಅತಿಥಿ ಉಪನ್ಯಾಸಕರ ಧ್ವನಿಯಾಗಿ ಮಾತನಾಡುವ ಸಾಮರ್ಥ್ಯವುಳ್ಳ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ ರಾಮು ಅವರಿಗೆ ತಾಲೂಕಿನ ಪದವೀಧರ ಮತದಾರರು ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್ ಮಂಜೇಗೌಡ, ತಾ.ಪಂ ಮಾಜಿ ಸದಸ್ಯ ನಟರಾಜ್ ನಾಕಲಗೊಡು, ಗ್ರಾ.ಪಂ ಮಾಜಿ ಅಧ್ಯಕ್ಷ ವೀರಭದ್ರಸ್ವಾಮಿ, ನಿವೃತ್ತ ಪ್ರಾಂಶುಪಾಲ ವೆಂಕಟರಾಂ ಮುಖಂಡರಾದ ನಂದೀಶ್, ನವೀನ್, ಪ್ರದೀಪ್, ಶಶಿ ಬೆಕ್ಕಡಿ, ನಾಗರಾಜು, ಸೋಮೇಶ್, ರುದ್ರೇಗೌಡ ಇತರರು ಇದ್ದರು.
Tags
ಆಲೂರು