ಅರಸೀಕೆರೆ: ರಾಜ್ಯದ ತಿರುಪತಿ ಎಂದೇ ಪ್ರಸಿದ್ಧವಾಗಿರುವ ತಾಲೂಕಿನ ಸುಕ್ಷೇತ್ರ ಮಾಲೇಕಲ್ ಅಮರಗಿರಿ ಲಕ್ಷಿ÷್ಮ ವೆಂಕಟರಮಣ ಸ್ವಾಮಿ ಮಹಾರಥೋತ್ಸ ಜುಲೈ 10 ರಂದು ಜರುಗಲಿದೆ. ಈ ಹಿನ್ನೆಲೆ ಈಗಾಗಲೇ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನದ ಅಭಿವೃದ್ಧಿ ಮತ್ತು ವ್ಯವಸ್ಥಾಪನ ಸಮಿತಿ ಸಕಲ ಸಿದ್ಧತೆಯಲ್ಲಿ ತೊಡಗಿದೆ.
ದೇವಾಲಯ ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಸಂಪ್ರದಾಯದAತೆ ಪ್ರತಿದಿನ ನಡೆಯುತ್ತಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಗಳು ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿವೆ.
ಆಷಾಢ ಮಾಸದ ದ್ವಾದಶಿಯಂದು ಲಕ್ಷಿ÷್ಮ ವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುವುದು ವಿಶೇಷ. ರಥೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವುದರಿಂದ ಭದ್ರತೆ ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಜರಾಯಿ ಮತ್ತು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ನಗರಸಭೆಯ ಪೌರಕಾರ್ಮಿಕರು ಶ್ರಮದಾನ ಮಾಡುವ ಮೂಲಕ ನಗರದಿಂದ ಮಾಲೇಕಲ್ ತಿರುಪತಿ ಸಂಪರ್ಕ ಕಲ್ಪಿಸುವ ರಸ್ತೆ ಉದ್ದಕ್ಕೂ ಸ್ವಚ್ಛತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ಸೌಕರ್ಯ ಕಲ್ಪಿಸಿಕೊಡಲಿದೆ.
ಆಯಕಟ್ಟಿನ ಪ್ರದೇಶ ಸೇರಿದಂತೆ ಬೆಟ್ಟದ ತಪ್ಪÀಲಿನಿಂದ ತುದಿಯವರೆಗೂ ಪೊಲೀಸ್ ಕಣ್ಗಾವಲು ಇರಲಿದ್ದು, ಇದಕ್ಕಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಡಿವೈಎಸ್‌ಪಿ ಅಶೋಕ್ ತಿಳಿಸಿದರು.
ಶ್ರೀದೇವಿ ಭೂದೇವಿ ಸಮೇತರಾಗಿ ಮಾಲೇಕಲ್ ಅಮರಗಿರಿ ತಿರುಪತಿಯಲ್ಲಿ ನೆಲೆಸಿರುವ ವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವ ಸಡಗರವನ್ನು ಕಣ್ತುಂಬಿಕೊಳ್ಳಲು ಭಕ್ತ ಸಮೂಹ ಕಾತುರದಿಂದ ಕಾದಿದೆ.
Tags
ಅರಸೀಕೆರೆ