ಚನ್ನರಾಯಪಟ್ಟಣ:ಮಕ್ಕಳ ಸಾಹಿತ್ಯ ಪರಿಷತ್ತಿನ ಹಾಸನ ಜಿಲ್ಲಾ ಘಟಕದ ನೂತನ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪತ್ರಕರ್ತ ಐ.ಕೆ.ಮಂಜುನಾಥ ಅವರನ್ನು ನೇಮಕ ಮಾಡಲಾಗಿದೆ.
ಪತ್ರಕರ್ತ ಐ.ಕೆ.ಮಂಜುನಾಥ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನನ್ನನ್ನು ಗುರುತಿಸಿ ಮಕ್ಕಳ ಸಾಹಿತ್ಯ ಪರಿಷತ್ತಿನ ಹಾಸನ ಜಿಲ್ಲಾ ಘಟಕದ *ಸಾಂಸ್ಕೃತಿಕ ಕಾರ್ಯದರ್ಶಿಯಾಗಿ* ನೇಮಕ ಮಾಡುವ ಮೂಲಕ ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಟ್ಟಿರುವ ಆದಿಚುಂಚನಗಿರಿ ಮಹಾ ಸಂಸ್ಥಾನ ಹಾಸನ ಶಾಖಾ ಮಠದ ಶ್ರೀಶ್ರೀ ಶಂಭುನಾಥ ಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳನ್ನು ತಿಳಿಸಿದರು,ಅದೇ ರೀತಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಚ.ನ.ಅಶೋಕ್ ಮತ್ತು ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಕೆ.ಗಂಗಾಧರ್ ಅವರು ನನ್ನ ಮೇಲೆ ನಂಬಿಕೆ ಮತ್ತು ವಿಶ್ವಾಸವಿಟ್ಟು ಕೊಟ್ಟಿರುವ ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಮೂಲ ಉದ್ದೇಶದಂತೆ ಮಕ್ಕಳಲ್ಲಿ ಅಡಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಆಸಕ್ತಿಯನ್ನು ಗುರುತಿಸುವ ಜೊತೆಗೆ ಮಕ್ಕಳಲ್ಲಿರುವ ಮತ್ತಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ನೀಡಿದರು,ಹಾಸನ ಜಿಲ್ಲೆಯ ಹಿರಿಯ ಮತ್ತು ಕಿರಿಯ ಸಾಹಿತಿಗಳು ಹಾಗೂ ಸಾಹಿತ್ಯ ಆಸಕ್ತರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಭೆಗಳಿಗೆ ಬೆಳಕು ಚೆಲುವ ವೇದಿಕೆ ನಿರ್ಮಿಸಿಕೊಡುವ ಕೆಲಸವನ್ನು ಮಾಡುವುದಾಗಿ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.