ಹಾಸನ :- ಜಿಲ್ಲೆಯಲ್ಲಿ ಹಾಗೂ ಹೇಮಾವತಿ ಜಲಾಶಯ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿದ್ದು ಜಲಾಶಯದಿಂದ ಜಲಾಶಯದ ಎಲ್ಲ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರನ್ನು ಹರಿಬಿಡಲಾಗುತ್ತಿದೆ ಆದ್ದರಿಂದ ಜಲಾಶಯ ವೀಕ್ಷಣೆಗೆ ಸಾವಿರಾರು ಮಂದಿ ಆಗಮಿಸುತ್ತಿದ್ದು ಗೊರೂರಿನಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಹೆಚ್ಚಾಗಿದೆ .
ಜಲಾಶಯ ವೀಕ್ಷಣೆಗೆ ಬೆವರುತ್ತಿರುವ ಪ್ರಯಾಣಿಕರು ತಮ್ಮ ವಾಹನಗಳಲ್ಲಿ ಬರುತ್ತಿರುವುದರಿಂದ ಅರಕಲಗೂಡು - ಹಾಸನ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ ಎಂದು ಮಾಹಿತಿ ಲಭ್ಯವಾಗಿದ್ದು .ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .