ಹೇಮಾವತಿ ಜಲಾಶಯದಲ್ಲಿ ಬಾಗಿನ ಸಲ್ಲಿಕೆ

ಹಾಸನ:- ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಗೊರೂರು ಹೇಮಾವತಿ ಜಲಾಶಯ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಕಳೆದ ಹಲವಾರು ದಿನಗಳಿಂದ ಉತ್ತಮ ಮಳೆಯಾದ ಕಾರಣ ಹೇಮಾವತಿ ಜಲಾಶಯ ಭರ್ತಿಯಾಗಿದ ಹಿನ್ನೆಲೆಯಲ್ಲಿ ಹೇಮಾವತಿ  ಜಲಾಶಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ  ಬಾಗಿನ ಸಲ್ಲಿಸಿದರು .
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಚ್.ಕೆ.ಕುಮಾರಸ್ವಾಮಿ, ಶ್ರೀ ಎ.ಟಿ.ರಾಮಸ್ವಾಮಿ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯತ್ ಸಿಇಒ ಕಾಂತರಾಜ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ಇಂಜಿನಿಯರ್ ಶಂಕರೇಗೌಡ, ಮುಖ್ಯ ಇಂಜಿನಿಯರ್ ಮಹೇಶ್, ಹೇಮಾವತಿ ಜಲಾಶಯ ವಿಭಾಗದ ಸೂಪರಿಂಟೆಂಡೆಂಟ್ ನಳಿನಿ, ಕಾರ್ಯಪಾಲಕ ಇಂಜಿನಿಯರ್ ಯೋಗೀಶ್ ಹಾಜರಿದ್ದರು.

Post a Comment

Previous Post Next Post