ಆಟವಾಡುತ್ತಿದ್ದ ಬಾಲಕನಿಗೆ ನಾಯಿ ಕಚ್ಚಿ ತೀವ್ರ ಗಾಯ

ಹಾಸನ: ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ 30 ನೇ ವಾರ್ಡ್ನ ಮಿರ್ಜಾಮೊಹಲ್ಲಾದಲ್ಲಿ ನಡೆದಿದೆ. 
ಬಾಲಕನ ಕೈ, ಬೆನ್ನು, ಕೆನ್ನೆ ಭಾಗಕ್ಕೆ ರಕ್ತಸಿಕ್ತ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿರ್ಜಾ ಮೊಹಲ್ಲಾ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. 
ಮಕ್ಕಳು ಆಟ ಆಡುವಾಗ, ಶಾಲೆಯಿಂದ ಬರುವಾಗ ಗುಂಪು ಗುಂಪಾಗಿ ಓಡಾಡುವ ಶ್ವಾನ ಪಡೆ ದಾಳಿ ಮಾಡುತ್ತಿವೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇನ್ನಾದರೂ ನಗರಸಭೆ ಅಧಿಕಾರಿಗಳು ಎಚ್ಚೆತ್ತು, ಶ್ವಾನಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Post a Comment

Previous Post Next Post