ಹಾಸನ: ಹಾಸನದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದು ಶಿರಾಡಿ ಘಾಟ್ ನಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಹೊಡೆದಿರುವ ಘಟನೆ ವರದಿಯಾಗಿದೆ.
ರಸ್ತೆಯ ತಿರುವಿನಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲವಾದರೂ ಸುಮಾರು
15 ಜನಕ್ಕೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದು, ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಸಂಚಾರ ಮುಕ್ತಗೊಳಿಸಲಾಗಿದೆ.