ಹರ್ ಘರ್ ಮೇ ತಿರಂಗ ...!!
75ನೇ ವರ್ಷದ ಸ್ವತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಮನೆಗಳಲ್ಲಿ ಆಗಸ್ಟ್ 11 ರಿಂದ 17ರ ವರೆಗೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಾಭಿಮಾನ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿಗಳು ನಾಗರೀಕರಲ್ಲಿ ಮನವಿ ಮಾಡಿದರು .
ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಮೋದಿ ಅವರು "ಹರ್ ಘರ್ ಮೇ ತಿರಂಗ" ಅಭಿಯಾನಕ್ಕೆ ಚಾಲನೆ ನೀಡಿದ್ದು ಜಿಲ್ಲೆಯಲ್ಲಿಯೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಾಭಿಮಾನ ತೋರ್ಪಡಿಸುವಂತೆ ತಿಳಿಸಿದರು.