ಹಾಸನ : -ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಪಲ್ಟಿಯಾಗಿ ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಜಿಲ್ಲೆಯ ಅರಕಲಗೂಡು ರಸ್ತೆಯ ಕಟ್ಟಾಯ ಬಳಿ ನಡೆದಿದೆ .
ಹಾಸನ ಮಾರ್ಗವಾಗಿ ಚಲಿಸುತ್ತಿದ್ದ ಕೆಎ-13-F-1995 ಸಂಖ್ಯೆಯ ಸಾರಿಗೆ ಬಸ್ ತಿರುವಿನಲ್ಲಿ ಸ್ಟಿಯರಿಂಗ್ ಲಾಕ್ ಆದ ಕಾರಣ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಬಸ್ ನಲ್ಲಿದ್ದ 9ಮಂದಿ ಪ್ರಯಾಣಿಕರಲ್ಲಿ 3ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ .
ಬಸ್ ಅಪಘಾತ ವಿಷಯ ತಿಳಿದ ಗೊರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ್ದಾರೆ .