ಹಾಸನ :- ಕಾಲೇಜಿಗೆ ತೆರಳಲು ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಲಿನ ಎಂಜಿನ್ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಮೊಸಳೆ ಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರೀತಿ (18) ಮೃತಪಟ್ಟ ದುರ್ದೈವಿಯಾಗಿದ್ದು ,ಮೂಲತಃ ಗುಡ್ಡದ ತೆರಣ್ಯ ಗ್ರಾಮದವರು ಎಂದು ತಿಳಿದು ಬಂದಿದ್ದು ,ಕಾಲೇಜಿಗೆ ತೆರಳಲು ರೈಲು ಹಳಿ ದಾಟುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಯತಪ್ಪಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.