ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಲು ನಾನು ಸದಾ ಸಿದ್ಧ : ಕೆ.ಎಂ.ಶಿ.

ಅರಸೀಕೆರೆ :- ಕ್ಷೇತ್ರದ ಜನರ ವಿವಿಧ ಬಗೆಯ ಸಮಸ್ಯೆಗಳನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸಲು ಸದಾ ಸಿದ್ಧನಾಗಿರುತ್ತೇನೆ ಎಂದೂ ಕ್ಷೇತ್ರ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಹೇಳಿದ್ದಾರೆ .
ನಗರದ ತಮ್ಮ ಕಚೇರಿಯಲ್ಲಿ ಇಂದು ತಾಲ್ಲೂಕಿನ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಸಂದರ್ಭದಲ್ಲಿ ತಮ್ಮ ಯಾವುದೇ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ನನ್ನೊಂದಿಗೆ ಹೇಳಿಕೊಳ್ಳಲು ನಾನು ನಿಮಗೆ ಸದಾ ಅವಕಾಶಗಳನ್ನು ಕೊಡುತ್ತೆ ,ತಮ್ಮ ಗ್ರಾಮಗಳಲ್ಲಿ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ನನ್ನ ಗಮನಕ್ಕೆ ತನ್ನಿ ಹಾಗೂ ನಡೆಯುತ್ತಿರುವ ಕಾಮಗಾರಿಗಳಲ್ಲಿ ಏನಾದರೂ ಲೋಪ ದೋಷಗಳಿದ್ದರೆ ಅದನ್ನು ಬುಡ ನನ್ನ ಗಮನಕ್ಕೆ ತನ್ನಿ ನಾನು ಬಗೆಹರಿಸುತ್ತೇನೆ ಎಂದರು .
ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರಿಂದ ಅಹವಾಲು ಸ್ವೀಕರಿಸಿದ ಶಾಸಕರು ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದರು .


Post a Comment

Previous Post Next Post