ಹೊಳೆನರಸೀಪುರ :- ಪತ್ನಿಯ ಕತ್ತು ಕೊಯ್ದು ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೋರ್ಟ್ ಆವರಣದಲ್ಲಿ ಇಂದು ನಡೆದಿದೆ .ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಕತ್ತು ಕೊಯ್ದು ಪತಿ ಶಿವಕುಮಾರ್ ಅಟ್ಟಹಾಸ ಮೆರೆದಿದ್ದು ಚಿಕಿತ್ಸೆ ಫಲಕಾರಿಯಾಗದೆ ಚೈತ್ರಾ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ .
ಹೊಳೆನರಸೀಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚೈತ್ರಾ ಅವರನ್ನು ಆಂಬ್ಯುಲೆನ್ಸ್ ಮೂಲಕ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಚೈತ್ರಾ ಕೊನೆಯುಸಿರೆಳೆದಿದ್ದಾರೆ .ಕತ್ತು ಕೊಯ್ದು ಆರೋಪಿ ಶಿವಕುಮಾರ್ ಎಸ್ಕೇಪ್ ಆಗಲು ಯತ್ನಿಸಿದ್ದ ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ .
ಘಟನೆ ಹಿನ್ನೆಲೆ :-
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಚೈತ್ರಾ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಶಿವಕುಮಾರ್ 7ವರ್ಷದ ಹಿಂದೆ ಮದುವೆಯಾಗಿದ್ದರು ಪತಿ ಪತ್ನಿ ನಡುವೆ ಹೊಂದಾಣಿಕೆ ಇಲ್ಲದಿದ್ದಕ್ಕೆ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು .ಇಂದು ಹೊಳೆನರಸಿಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ರಾಜಿ ಸಂಧಾನ ಮಾತುಕತೆಗಾಗಿ ಬಂದು ಲೋಕದಾಲತ್ ನಲ್ಲಿ ಪತ್ನಿ ಜೊತೆ ಚೆನ್ನಾಗಿ ಇರುತ್ತೇನೆಂದು ಪತಿ ಶಿವಕುಮಾರ್ ಹೇಳಿಕೆ ಕೊಟ್ಟಿದ್ದ ಮಕ್ಕಳಿಬ್ಬರ ಸಲುವಾಗಿ ಹೊಂದಾಣಿಕೆ ಜೀವನ ನಡೆಸುವಂತೆ ವಕೀಲರು ಹಾಗೂ ನ್ಯಾಯಾಧೀಶರು ಸಲಹೆ ಕೊಟ್ಟಿದ್ದರು ಸಂಧಾನಕ್ಕೆ ಒಪ್ಪದ ಇವರು ಬಂದು ಬಳಿಕ ಶೌಚಾಲಯದಲ್ಲಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ .
ಪತ್ನಿ ಕೊಂದು ಮಗುವನ್ನು ಹತ್ಯೆ ಮಾಡಲು ಮುಂದಾದಾಗ ಸ್ಥಳದ ಇಲ್ಲದ್ದರಿಂದ ಮಗು ರಕ್ಷಣೆ ಮಾಡಲಾಗಿದೆ ತಕ್ಷಣ ಚಾಕು ತೋರಿಸಿ ಎಲ್ಲರನ್ನು ಎದುರಿಸಿ ಆರೋಪಿ ಅಲ್ಲಿಂದ ಎಸ್ಕೇಪ್ ಅಗಲು ಯತ್ನಿಸಿದ್ದಾನೆ ಈ ವೇಳೆ ಆರೋಪಿ ಶಿವಕುಮಾರ್ ಬೆನ್ನಟ್ಟಿ ಹಿಡಿದು ಸಾರ್ವಜನಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಹೊಳೆನರಸಿಪುರ ನಗರ ಠಾಣೆಯಲ್ಲಿ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .