ಹಾಸನ :-ಅತಿಯಾಗಿ ಮಳೆ ಸುರಿಯುತ್ತಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಮಳೆಗಾಲದಲ್ಲಿ ಗೊಬ್ಬರ ಹಾಕಬೇಡಿ ಇಂತಹ ಸಂದರ್ಭದಲ್ಲಿ ಗೊಬ್ಬರ ಹಾಕಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಹೇಳಿದ್ದಾರೆ .
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಜಿಲ್ಲೆಗೆ 32,500 ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು, 38 ಸಾವಿರ ಮೆಟ್ರಿಕ್ ಟನ್ ಗೊಬ್ಬರ ಬಂದಿದೆ. ಆದರೆ ನಿರಂತರ ಮಳೆಯ ನಡುವೆಯೂ ರೈತರು ಹೆಚ್ಚು ಯೂರಿಯಾ ಬಳಕೆ ಮಾಡಿರುವುದರಿಂದ ಕೊರತೆಯಾಗಿದೆ.10.300 ಮೆಟ್ರಿಕ್ ಟನ್ ಗೊಬ್ಬರ ಬೇಕಿದ್ದು, ಈಗಾಗಲೂ 4500 ಮೆ.ಟನ್. ಬಂದಿದೆ. ನಾಳೆ 1000 ಸಾವಿರ ಮೆಟ್ರಿಕ್ ಟನ್ ಬರಲಿದೆ. ಗೊಬ್ಬರ ಸಿಗುವುದಿಲ್ಲ ಎಂದು ರೈತರು ಹತಾಶರಾಗುವುದು ಬೇಡ ಎಂದು ಹೇಳಿದರು.
ಇದೇ ವೇಳೆ ಪಿಎಂ ಕಿಸಾನ್ ಯೋಜನೆಗೆ ಬ್ಯಾಂಕ್ ಪಾಸ್‌ಬುಕ್‌ಗೆ ಶೀಘ್ರ ಆಧಾರ್ ಮತ್ತು ಮೊಬೈಲ್ ನಂಬರ್ ಲಿಂಕ್ ಮಾಡುವಂತೆ ರೈತರಿಗೆ ಮನವಿ ಮಾಡಿದರು.
Tags
ಹಾಸನ