ಹಾಸನಾಂಬಾ ಜಾತ್ರಾ ಮಹೋತ್ಸವ : ಜಿಲ್ಲಾಧಿಕಾರಿ ಮತ್ತು ದೇವಾಲಯದ ಆಡಳಿತಾಧಿಕಾರಿಗಳಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರಿಗೆ ಅಧಿಕೃತ ಆಹ್ವಾನ.
ಹಾಸನ :- ಜಿಲ್ಲೆಯ ಅಧಿದೇವತೆ ಶ್ರಿ ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಇದೇ ತಿಂಗಳ ಅಕ್ಟೋಬರ್ 13 ರಿಂದ ಆರಂಭವಾಗುತ್ತಿರುವುದರಿಂದ ಹಾಸನದ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಹಾಗೂ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಬಿ. ಎ ಜಗದೀಶ್ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿಮಾಡಿ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದ್ದಾರೆ.