ಹಾಸನ: ಹಾಸನಾಂಬಾ ದರ್ಶನಕ್ಕೆ ಇಂದು ವಿಧ್ಯುಕ್ತ ತೆರೆ ಎಳೆಯಲಾಯಿತು. ಇಂದು ಮಧ್ಯಾಹ್ನ 12.50 ಗಂಟೆಯ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂಗೌಡ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಯಿತು.
ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಡಲಾಯಿತು. ಇದರ ಇನ್ನೊಂದು ವಿಶೇಷತೆ ಎಂದರೆ ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ ಎಂಬ ಪ್ರತೀತಿ ಇದೆ.