ಹಾಸನ :- ಜಿಲ್ಲೆಯ ಅಧಿದೇವತೆ ಹಾಸನಾಂಬೆ ಮತ್ತು ಸಿದ್ದೇಶ್ವರ ಜಾತ್ರೆಯನ್ನು ಅದ್ದೂರಿಯಾಗಿ ನಡೆಸುವ ಕುರಿತು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲ್ಯ ನೇತೃತ್ವದಲ್ಲಿ ಜಾತ್ರಾ ಪೂರ್ವಭಾವಿ ಸಭೆ ನಡೆಸಲಾಯಿತು.
ಹಾಸನಾಂಬೆ ಮತ್ತು ಸಿದ್ದೇಶ್ವರ ಜಾತ್ರೆಯನ್ನು ಯಶಸ್ವಿಯಾಗಿ ನಡೆಸುವ ಕುರಿತು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದ ಸಚಿವರು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.ಹಾಗೂ ಜಿಲ್ಲೆಯಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅಂವಾತರ ತಪ್ಪಿಸಲು ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಚನ್ನರಾಯಪಟ್ಟಣ ಶಾಸಕರಾದ ಶ್ರೀ ಬಾಲಕೃಷ್ಣ, ಜಿಲ್ಲಾಧಿಕಾರಿ ಅರ್ಚನ ಎಂ.ಎಸ್, ಜಿಲ್ಲಾ ಪಂಚಾಯಿತಿ ಸಿ ಇ ಓ ಕಾಂತರಾಜು, ದೇವಾಲಯದ ಆಡಳಿತಾಧಿಕಾರಿ ಬಿ.ಎ ಜಗದೀಶ್, ನಗರಸಭೆ ಅಧ್ಯಕ್ಷ ಮೋಹನ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿ.ವೈ,ಎಸ್.ಪಿ ಉದಯ್ ಭಾಸ್ಕರ್,ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವಸ್ವಾಮಿ, ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ, ತಹಶೀಲ್ದಾರ್ ನಟೇಶ್ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.