ಕನ್ನಡ ಸಮ್ಮೇಳನ ಜಾಗೃತಿ ವೇದಿಕೆಯಾಗಬೇಕು : ಎ.ಟಿ.ರಾಮಸ್ವಾಮಿ

ಅರಕಲಗೂಡು: ಸಾಹಿತ್ಯ ಸಮ್ಮೇಳನ ನಮ್ಮ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸುವ ಮಹತ್ವದ ವೇದಿಕೆಯಾಗಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಜಿಲ್ಲಾ ೨೧ ನೇ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆ ಸಮೀಪ ಸೋಮವಾರ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು, ನಮ್ಮ ಭಾಷೆ, ಸಂಸ್ಕೃತಿ, ನೆಲ-ಜಲ ಹಾಗೂ ಸಂಪ್ರದಾಯವನ್ನು ಸಂರಕ್ಷಸಿಸುವ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಇದು ಕನ್ನಡಿಗರ ಹೆಮ್ಮೆ. ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವ ಈ ಸಂಸ್ಥೆಯಿAದ ನಮ್ಮೂರಿನಲ್ಲಿ ಜಿಲ್ಲಾ ಸಮ್ಮೇಳನ ಏರ್ಪಡಿಸಿರುವುದು ಸಂತಸದ ವಿಷಯವಾಗಿದೆ ಎಂದರು.
ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ ಅವರು ರಾಷ್ಟç ಧ್ವನಾರೋಹಣ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಚ್.ಎಲ್.ಮಲ್ಲೇಶಗೌಡ ಅವರು ಪರಿಷತ್ ಧ್ವಜಾರೋಹಣ ನೆರವೇರಿಸಿದರು. ಹಾರಂಗಿ ಮಹಾ ಮಂಡಳಿ ಮಾಜಿ ಅಧ್ಯಕ್ಷ ಚೌಡೇಗೌಡ, ಕಸಾಪ ತಾಲೂಕು ಅಧ್ಯಕ್ಷ ಅನಿಲ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಇತರರಿದ್ದರು. ದೇವಾನಚಿದ ವರಪ್ರಸಾದ್ ತಂಡದವರು ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡಿದರು.  

Post a Comment

Previous Post Next Post