ಎ.ಟಿ. ರಾಮಸ್ವಾಮಿ ಜೆಡಿಎಸ್​ ತೊರೆದು ಬಿಜೆಪಿಗೆ ಸೇರ್ಪಡೆ

ಡಬಲ್ ಇಂಜಿನ್ ಸರ್ಕಾರಕ್ಕೆ ಕರ್ನಾಟಕದಲ್ಲಿ ಮತ್ತೊಂದು ಅವಧಿಗೆ ಅಧಿಕಾರವನ್ನು ಹಿಡಿಯುವುದು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸಕಲ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಅದರ ಒಂದು ಅಂಗವಾಗಿ ಅರಕಲಗೂಡಿನ ಶಾಸಕ ಎ.ಟಿ. ರಾಮಸ್ವಾಮಿ ಜೆಡಿಎಸ್​ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಹಾಸನ ಭಾಗದಲ್ಲಿ ಜೆಡಿಎಸ್​ ಪ್ರಾಬಲ್ಯವಿದ್ದು, ಅಲ್ಲಿ ಬಿಜೆಪಿಯ ಪ್ರಭಾವ ಹೆಚ್ಚಿಸುವುದು ಬಿಜೆಪಿ ಉದ್ದೇಶವಾಗಿದ್ದು, ಅದೇ ಹಿನ್ನೆಲೆಯಲ್ಲಿ ಈಗ ಅರಕಲಗೂಡಿನ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಬಿಜೆಪಿಗೆ ಸೆಳೆದುಕೊಳ್ಳಲಾಗಿದೆ ಎನ್ನಲಾಗಿದೆ. ಇಂದು ದೆಹಲಿಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿಗೆ ಎ.ಟಿ. ರಾಮಸ್ವಾಮಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್​ ಮಾಡಿಕೊಂಡರು. 'ಅರಕಲಗೂಡಿನ ಶಾಸಕರು, ಉತ್ತಮ ಸಂಸದೀಯ ಪಟು ಶ್ರೀಎ.ಟಿ. ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಆತ್ಮೀಯವಾದ ಸ್ವಾಗತ ಕೋರುತ್ತೇನೆ. ರಾಮಸ್ವಾಮಿ ಅವರ ಆಗಮನದಿಂದ ಹಾಸನ ಭಾಗದಲ್ಲಿ ನಮ್ಮ ಪಕ್ಷಕ್ಕೆ ಮತ್ತಷ್ಟು ಬಲ ಸಿಗಲಿದೆ‌' ಎಂದು ಹೇಳಿದ್ದಾರೆ.

Post a Comment

Previous Post Next Post