ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ.
ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ. ಅವರು ಕುಳಿತು ತೀರ್ಮಾನ ಮಾಡ್ತಾರೆ. ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ. ಹಾಸನದಲ್ಲಿ ಪಂಚರತ್ನ ಯಾತ್ರೆ ಬಗ್ಗೆ ಮುಂದೆ ತಿಳಿಸುತ್ತೇನೆ ಎಂದು ರೇವಣ್ಣ ಹೇಳಿದ್ದಾರೆ