ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಳಯದಲ್ಲಿ ನುಂಗಲಾರದ ತುತ್ತಾಗಿದೆ. ಮಾಜಿ ಸಚಿವ ರೇವಣ್ಣ ಅವರ ಕುಟುಂಬ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರೆ, ಮಾಜಿ ಸಿಎಂ ಕುಮಾರಸ್ವಾಮಿ ಮಾತ್ರ ಕಾರ್ಯಕರ್ತರ ಸ್ವರೂಪ್ ಗೆ ನೀಡುವುದಾಗಿ ಹಠ ಹಿಡಿದಿದ್ದಾರೆ.
ಹೀಗಾಗಿ ಹಾಸನ ಟಿಕೆಟ್ (Hassan Ticket)ಕಗ್ಗಾಂಟಾಗಿಯೇ ಉಳಿದಿದೆ. ಯಲಹಂಕದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಕಾರ್ಯಕರ್ತರೊಬ್ಬರು ಪಕ್ಷದ ಪರವಾಗಿ ಕೆಲಸ ಮಾಡಿದವರಿಗೆ ಟಿಕೆಟ್ ನೀಡಬೇಕು. ಹಾಸನದಲ್ಲಿ ಸ್ವರೂಪ್‌ಗೆ (Swaroop) ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಮಾಧ್ಯಮಮಿತ್ರರಿಗೂ ಹೇಳ್ತೀನಿ ಕೇಳಿಸಿಕೊಳ್ಳಿ. ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯ. ಕಾರ್ಯಕರ್ತರಿಗೆ ಟಿಕೆಟ್ ಸಿಗುತ್ತದೆ ಎಂದು ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ ಎಂದು ಪರೋಕ್ಷವಾಗಿ ಸ್ವರೂಪ್ ಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.
ಆದರೆ, ಹಾಸನದಲ್ಲಿ ಭವಾನಿಗೆ (Bhavani Revanna) ಟಿಕೆಟ್ ನೀಡದಿದ್ದರೆ, ಹೊಳೇನರಸೀಪುರದಲ್ಲಿ ನಾನೂ ಕೂಡ ಸ್ಪರ್ಧೆ ಮಾಡುವುದಿಲ್ಲ ಎದು ಶುಕ್ರವಾರದ ಸಭೆಯಲ್ಲಿ ರೇವಣ್ಣ (HD Revanna) ಹೇಳಿದ್ದಾರೆ ಎಂದು ತಿಳಿದು ಬಂದಿದೆ.