ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಹಲ್ಲೆಗೈದ ಪಾಗಲ್​ ಪ್ರೇಮಿ

ಹಾಸನ:ಅಪ್ರಾಪ್ತ ಬಾಲಕಿ ಮೇಲೆ ಪಾಗಲ್​ ಪ್ರೇಮಿಯೊಬ್ಬ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.


ಗ್ರಾಮದ 25 ವರ್ಷದ ಯುವಕನಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಯ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದರ ಪರಿಣಾಮವಾಗಿ ಆಕೆ ತೀವ್ರವಾಗಿ ಗಾಯಗೊಂಡಿದ್ದಾಳೆ.

ಸಾವು-ಬದುಕಿನ ನಡುವ ಹೋರಾಟ ನಡೆಸುತ್ತಿರುವ ಬಾಲಕಿಯ ಸ್ಥಿತಿಯು ಗಂಭೀರವಾಗಿದ್ದು, ಆಕೆಯನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post a Comment

Previous Post Next Post