ಹಾಸನ:- ಸದೃಢ ಆರೋಗ್ಯಕ್ಕೆ ಯೋಗ ತುಂಬಾ ಸಹಕಾರಿಯಾಗಿದ್ದು,ಎಲ್ಲರೂ ಯೋಗ ಮಾಡಿ ತಮ್ಮ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳುವಂತೆ ಶಾಸಕರಾದ ಸ್ವರೂಪ್ ಪ್ರಕಾಶ್ ಕರೆ ನೀಡಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿAದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 9 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಯೋಗದಲ್ಲಿ ಪಾಲ್ಗೊಂಡು ಮೈ ಮನಸ್ಸು ಹಗುರವಾದಂತಹ ಅನುಭವವಾಗುತ್ತದೆ ಎಲ್ಲಾರೂ ಪ್ರತಿನಿತ್ಯ ಯೋಗ ಅಭ್ಯಾಸ ಮಾಡಿ ಎಂದರು.
ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಮಾತನಾಡಿ ತಾನು ಕೂಡ ಇದೆ ಮೊದಲ ಬಾರಿಗೆ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗ ಅಭ್ಯಾಸ ಮಾಡಿದ್ದೇನೆ, ಮುಂದಿನ ದಿನಗಳಲ್ಲಿ ಉತ್ತಮ ತರಬೇತುದಾರರ ಮೂಲಕ ದಿನನಿತ್ಯ ಯೋಗ ಅಭ್ಯಾಸ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ಸದೃಡರಾಗಬಹುದು, ಆದುದರಿಂದ ಎಲ್ಲರೂ ಯೋಗ ಅಭ್ಯಾಸದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್ ಪೂರ್ಣಿಮಾ, ಡಿ. ಎಚ್.ಓ ಶಿವಸ್ವಾಮಿ, ಸರ್ಕಾರಿ ನೌಕರರ ಸದಂಘದ ಅಧ್ಯಕ್ಷ ಈ ಕೃಷ್ಣೇಗೌಡ ಪೌರಾಯುಕ್ತ ಸತೀಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ಮಹಾಲಿಂಗಯ್ಯ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ವಿವಿಧ ಯೋಗ ಚಟುವಟಿಕೆಗಳಲ್ಲಿ ಪಾಲ್ಗೊಂಡರು.(ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಹಾಸನ)