ರಾಷ್ಟ್ರೀಯ ತೆಂಗು ಅಭಿವೃದ್ಧಿ ಮಂಡಳಿಗೆ ಆಯ್ಕೆ

ಬೇಲೂರು : ರಾಷ್ಟ್ರೀಯ ತೆಂಗು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷರಾಗಿ ಇಲ್ಲಿನ ಬಿಜೆಪಿ ಮುಖಂಡ ಬೆಣ್ಣೂರು ರೇಣುಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಕೊಚ್ಚಿನ್ ನಲ್ಲಿರುವ ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.

'ತೆಂಗು ಬೆಳೆಗಾರರಿಗೆ ನೆರವಾಗುವ ಹಾಗೂ ಮಂಡಳಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ' ಎಂದು ಬೆಣ್ಣೂರು ರೇಣುಕುಮಾರ್ ತಿಳಿಸಿದ್ದಾರೆ.

Advertisement

Advertisement



Post a Comment

Previous Post Next Post