ಹಾಸನ: ವಾಹನವನ್ನು ಹಿಂದಿಕ್ಕುವ ಭರದಲ್ಲಿ ಟೆಂಪೋ ಟ್ರಾವೆಲ್ಲರ್, ಆಮ್ನಿ ವಾಹನಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, 25 ಕಾರ್ಮಿಕರು ಗಾಯಗೊಂಡಿದ್ದಾರೆ.
ಜಾಕಿ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು 25 ಕಾರ್ಮಿಕರನ್ನು ಹಾಸನಕ್ಕೆ ಕರೆತರುತ್ತಿದ್ದ ಟಿಟಿ ವಾಹನ, ತಾಲ್ಲೂಕಿನ ಚಿಕ್ಕಮಲ್ಲೇನಹಳ್ಳಿ ಗ್ರಾಮದ ಬಳಿ, ಆಮ್ನಿ ವಾಹನಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.ಬಹುತೇಕ ಕಾರ್ಮಿಕರು ಮಹಿಳೆಯರಾಗಿದ್ದಾರೆ.
ಟಿಟಿಯಲ್ಲಿದ್ದ ಕೆಲ ಮಹಿಳೆಯರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಎಲ್ಲರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Tags
ಹಾಸನ