ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ

ಸಕಲೇಶಪುರ  : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ ಐ ಟಿ ಯು  ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತರು ಪಟ್ಟಣದಲ್ಲಿ ಸಿ ಡಿ ಪಿ ಓ ಕಚೇರಿ ಎದುರು  ಪ್ರತಿಭಟನೆ ನಡೆಸಿದರು.


 ತಾಲೂಕು ಅಂಗನವಾಡಿ ನೌಕರರ ಸಂಘದ  ಅಧ್ಯಕ್ಷೆ ನಾಗಲಕ್ಷ್ಮಿ ಮಾತನಾಡಿ, ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‌ಗಳಿಗಾಗಿ ಹಾಗೂ 2023 ರ ಬಜೆಟ್‌ನಲ್ಲಿ  ಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಒತ್ತಾಯಿಸಿ ಸಿ ಐ ಟಿ ಯು  ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ  ಎಂದು ಹೇಳಿದರು. 

ದೇಶದಲ್ಲಿನ ಎರಡು ಕೋಟಿ ಗರ್ಭಿಣಿ ಮಹಿಳೆಯರು,  ಹಾಲುಣಿಸುವ ಬಾಣಂತಿಯರು ಹಾಗೂ ಆರು ವರ್ಷಗಳ ಒಳಗಿನ ಎಂಟು ಕೋಟಿ ಮಕ್ಕಳಿಗೆ ಆರೋಗ್ಯದ ವಿಷಯಗಳನ್ನು ತಲುಪಿಸುವ ಕಾರ್ಯವನ್ನು ದೇಶದ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತ್ಯಾಗ ಮತ್ತು  ಶ್ರಮದಿಂದ ಮಾಡುತ್ತಿದ್ದಾರೆ. ಆದರೆ, ದೇಶದ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಇದೆ ಎಂದರು. 

ಸರಕಾರವು ಅಂಗನವಾಡಿ ಕಾರ್ಯಕರ್ತೆಯರನ್ನು ವಿವಿಧ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರು ಒತ್ತಡದಿಂದ ಕಾರ್ಯನಿರ್ವಹಿಸುವಂತಾಗಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಇತರೆ ಕೆಲಸಗಳಿಗೆ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿದರು ಸರಕಾರ ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ  ಪ್ರತಿಭಟನೆ ನಡೆಸಲಾಗುವುದು ಎಂದು ಆಚರಿಸಿದರು  ಸಿಐಟಿಯುನ ಮುಖಂಡೆ ಸೌಮ್ಯ ಮಾತನಾಡಿ ಅಂಗನವಾಡಿ ಕಾರ್ಯಕರ್ತರು ಸಂಘಟಿತರಾಗುತ್ತಿದ್ದಾರೆ, ತಮ್ಮ ಹಕ್ಕುಗಳಿಗೆ ಮುಷ್ಕರಗಳಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುವ ಕಾರಣಕ್ಕಾಗಿ  ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ. ಮುಷ್ಕರಗಳಲ್ಲಿ ಭಾಗವಹಿಸಿದರು ಎನ್ನುವ ಕಾರಣಕ್ಕಾಗಿ ದೆಹಲಿಯಲ್ಲಿ ಸಾವಿರಾರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾನೂನು ಬಾಹಿರವಾಗಿ ಕೆಲಸದಿಂದ ವಜಾ ಮಾಡಿರುವುದು ಖಂಡನೀಯ  ಎಂದು ಹೇಳಿದರು. 

ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳಾದ ದೇಶದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗದಿ ಮಾಡಬೇಕು, ಸಾಮಾಜಿಕ ಭದ್ರತೆ, ನೀಡಬೇಕು, NEP 2020ಯನ್ನು ಹಿಂಪಡೆಯಬೇಕು. ಗುಣಮಟ್ಟದ ಮೊಬೈಲ್‌ಗಳನ್ನು ಕೊಡಬೇಕು, ಪೋಷಕ ಅಭಿಯಾನ'ಕ್ಕೆ ಆಧಾರ್ ಅಥವಾ ಫೋನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಆದೇಶವನ್ನು ಹಿಂಪಡೆಯಬೇಕು ಎಂದರು. ಅಪೌಷ್ಟಿಕತೆ ವಿರುದ್ಧ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿದ ಲಕ್ಷಾಂತರ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿಯಾದ ಸುಮಿತ್ರ, ಸದಸ್ಯರುಗಳಾದ ನಾಜಿಯ ಇದ್ದರು

Post a Comment

Previous Post Next Post