ಹಾಸನ : ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಘಟನೆ ಹಾಸನ ನಗರದ ಅಜಾದ್ ಮೊಹಲ್ಲಾದಲ್ಲಿ ನಡೆದಿದೆ.
ಮೊಹಮ್ಮದ್ ಯಾಸಿನ್ ಎಂಬುವವರ ಮಕ್ಕಳಾದ ಉಸ್ಮಾನ್ ಅಲಿ ಹಾಗೂ ಶೌಕತ್ ಅಲಿ ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಕ್ಕಳು. ಬುಧವಾರ ಉಸ್ಮಾನ್ ಅಲಿ ಹಾಗೂ ಶೌಕತ್ ಅಲಿ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ಇಬ್ಬರ ಮೇಲೆ ದಾಳಿ ಮಾಡಿವೆ. ಮುಖದ ಭಾಗವನ್ನು ಕಚ್ಚಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕುವಂತೆ ನಗರಸಭೆ ಅಧಿಕಾರಿಗಳಿಗೆ ಸ್ಥಳೀಯರ ಆಗ್ರಹಿಸಿದ್ದಾರೆ.
Tags
ಹಾಸನ