ಕರ್ತವ್ಯಲೋಪ : ಮೂವರು ಪಿ.ಡಿ.ಓ ಗಳ ಅಮಾನತ್ತು

ಹಾಸನ (ಕರ್ನಾಟಕ ವಾರ್ತೆ):-ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ  ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ  ನಿರ್ವಹಿಸಿದ ಅವಧಿಯಲ್ಲಿ ಕರ್ತವ್ಯಲೋಪ ಮಾಡಿದ ಮೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಆದೇಶಿಸಿದ್ದಾರೆ.


  ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ  ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ  ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18 ಎ ನಿವೇಶನವನ್ನು  ಖಾಸಗಿ ವ್ಯಕ್ತಿಯ ಹೆಸರಿಗೆ  ದಾಖಲು ಮಾಡಿರುವ ಹಿನ್ನಲೆಯಲ್ಲಿ ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಲಿ ಡಿ ಕಾಳೇನಹಳ್ಳಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ  ನವೀನ್ ಸಿ ಎಂ, ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಲಿ ಕೆಂಬಾಳು/ಬಾಗೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೃμÉ್ಣ ಗೌಡ ಹಾಗೂ ಈ ಹಿಂದೆ ಬಳದರೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಲಿ ಡಿ ಬಳದರೆ ಹಾಗೂ ದಿಂಡಗೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ  ರಾಮಸ್ವಾಮಿ ಇವರನ್ನು   ಕರ್ನಾಟಕ ನಾಗರಿಕ ಸೇವಾ (ಸಿಸಿಎ) ನಿಯಾಮವಳಿ 1957 ರ ನಿಯಮ 10(1) (ಡಿ) ರಲ್ಲಿರುವ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿರುತ್ತಾರೆ.

Post a Comment

Previous Post Next Post