ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ.

ಹಾಸನ:- ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಕರಾರಸಾ ನಿಗಮ ವಿಭಾಗೀಯ ನಿಯಂತ್ರಕರು ನಿಗಮದ ವಿಭಾಗೀಯ ಕಛೇರಿಯಲ್ಲಿ ನಿಗಮವು ತನ್ನ ಸಿಬ್ಬಂದಿ ಹಾಗೂ ಅವರ ಅವಲಂಭಿತರ ಕಲ್ಯಾಣಕ್ಕಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಜೊತಗೂಡಿ ಜಾರಿಗೊಳಿಸಿರುವ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೆ ವಿಮಾ ಸೌಲಭ್ಯ ಕಲ್ಪಿಸಿರುತ್ತದೆ. 
ಪಿ.ಎನ್. ನಾಗರಾಜು, 52 ವರ್ಷ, ಚಾಲಕ-ಕಂ-ನಿರ್ವಾಹಕರು, ದಿನಾಂಕ 01/02/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಮಾಡಿದ ಪರಿಣಾಮ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ.50.00 ಲಕ್ಷಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್, ಎನ್ ಆರ್ ವೃತ್ತ ಶಾಖೆ, ಹಾಸನ, ಇವರಿಂದ ಮೃತರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
ವಿಭಾಗೀಯ ನಿಯಂತ್ರಕರಾದ ದೀಪಕ್ ಕುಮಾರ್ ಎಂ, ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕರಾದ ಅನುರಾಧ ಟಿ ರವರು, ಮುಖ್ಯ ವ್ಯವಸ್ಥಾಪಕರಾದ ಶಿವಕುಮಾರ್, ಎನ್ ಆರ್ ವೃತ್ತ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಶಿವರಾಮ್ ರವರು, ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಅಧಿಕಾರಿಗಳು, ಹಾಗೂ ಸಂಸ್ಥೆಯ ಇತರೆ ಅಧಿಕಾರಿಗಳು, ಡಿಪೆÇೀ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Post a Comment

Previous Post Next Post