ಹಾಸನ: ಲಯನ್ಸ್ ಸಂಸ್ಥೆ ಎಂದರೇ ಮುಖ್ಯವಾಗಿ ಸಾಮಾಜಿಕ ಸ್ವಾಸ್ಥ್ಯಾ ಕಾಪಾಡುವುದು ಮುಖ್ಯ ಗುರಿಯಾಗಿದೆ ಎಂದು ಉಚಿತ ಹಲ್ಲು ಮತ್ತು ಕಣ್ಣು ತಪಾಸಣಾ ಶಿಬಿರದಲ್ಲಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾದ ಹೆಚ್.ಕೆ. ನಾಗೇಶ್ ತಿಳಿಸಿದರು.
ನಗರದ ಎಸ್.ಬಿ.ಜಿ. ಥಿಯೇಟರ್, ಹಳೆ ಎಲ್.ಐ.ಸಿ. ಕಛೇರಿ ಕಟ್ಟಡದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆ ಆದ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಹಲ್ಲು ಮತ್ತು ಕಣ್ಣು ತಪಾಸಣಾ ಶಿಬಿರದಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಲಯನ್ ಸಂಸ್ಥೆಯು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ದೃಷ್ಟಿಯಿಂದ ಸ್ಥಾಪನೆಯಾದ ಸಂಸ್ಥೆಯಾಗಿದ್ದು, ಉಚಿತ ಆರೋಗ್ಯ ಶಿಬಿರ, ಬಡತನ ನಿವಾರಣೆ, ಶೈಕ್ಷಣಿಕ ಸೇವೆಗಳು, ಹಾಗೂ ಅನೇಕ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಇಂದು ಆಚಾರ್ಯ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಲಯನ್ ಸಂಸ್ಥೆಯ ಖಜಾಂಚಿ ಬಿ.ಎಂ. ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶೇಕಡ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಳ್ಳುವುದರ ಜೊತೆಗೆ ತಮ್ಮ ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ . ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಸಮಾಜ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು .ಎಂದು ಮನವಿ ಮಾಡಿದರು.
ವೈದ್ಯಾಧಿಕಾರಿಗಳಾದ ಡಾ. ಅನುಪಮಾರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆರೋಗ್ಯ ಶುಚಿತ್ವ ಬಹಳ ಮುಖ್ಯವಾಗಿದೆ. ಅದರಲ್ಲಿಯೂ ವಿಶೇಷವಾಗಿ ಹಲ್ಲುಗಳು ಎಂದರೇ ಮಾನವನ ದೇಹದಲ್ಲಿ ಅತಿ ಮುಖ್ಯವಾದಂತ ಭಾಗವಾಗಿದ್ದು, ಅವುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರದ ಡಾ. ಆದರ್ಶ ಅವರು ಮಾತನಾಡಿ, ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಣ್ಣು ಮತ್ತು ಹಲ್ಲು ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಆಡಳಿತ ಮಂಡಳಿ ಸದಸ್ಯರಾದ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ವೇತಾ ಹರೀಶ್, ಕುಮಾರಿ ರಂಜಿತಾ ಹಾಗೂ ಲಯನ್ಸ್ ಸಂಸ್ಥೆ ಕಾರ್ಯದರ್ಶಿಗಳಾದ ಕಿರಣ್, ಜಿಲ್ಲಾ ಅಂಬಾಸಿಡರ್ ಅಶೋಕ್ ಕುಮಾರ್, ಉಪಾಧ್ಯಕ್ಷರಾದ ರಮೇಶ್, ಮಾಜಿ ಲಯನ್ಸ್ ಸದಸ್ಯರಾದ ಸಿ. ಶಿವಸ್ವಾಮಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ಮಾಜಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಐ.ಜಿ. ರಮೇಶ್, ಮಾಜಿ ಖಜಾಂಚಿಗಳಾದ ಮಂಜೇಗೌಡ, ಜಿಲ್ಲಾ ಪಂಚಾಯಿತಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಲಯನ್ಸ್ ಸಂಸ್ಥೆಯ ಸದಸ್ಯರಾದ ವೆಂಕಟೇಗೌಡ್ರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Tags
ಹಾಸನ