ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಮೀಸಲಾತಿಯ ಅನ್ವಯ ಅಧ್ಯಕ್ಷ ಸ್ಥಾನವು ಬಿಸಿಎಂಎ ವರ್ಗಕ್ಕೆ ಮೀಸಲಾಗಿದ್ದು ಈ ಸ್ಥಾನಕ್ಕೆ ದೊಡ್ಡಗನ್ನಿ ಗ್ರಾಮದ ಜೆಡಿಎಸ್ ಬೆಂಬಲಿತ ಸದಸ್ಯ ಜಿ ಆರ್ ಉಮೇಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು, ಅದೇ ರೀತಿ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಈ ಸ್ಥಾನಕ್ಕೆ ಎ ಚೋಳೇನಹಳ್ಳಿ ಗ್ರಾಮದ ಜೆಡಿಎಸ್ ಬೆಂಬಲಿತ ಸದಸ್ಯ ಶ್ರೀಮತಿ ಇಂದಿರಾ ಸೋಮಶೇಖರ್ ಒಬ್ಬರೇ ಅರ್ಜಿ ಸಲ್ಲಿಸಿದ್ದು, ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಚೆಲುವನಾರಾಯಸ್ವಾಮಿ ಅವರು ನೂತನ ಅಧ್ಯಕ್ಷರಾಗಿ ಜಿ ಆರ್ ಉಮೇಶ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಇಂದಿರಾ ಸೋಮಶೇಖರ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಘೋಷಣೆ ಮಾಡಿದರು, ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್.ಪುಟ್ಟಸ್ವಾಮಿಗೌಡ ಮಾತನಾಡಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಎಲ್ಲಾ ಸದಸ್ಯರ ಸಲಹೆ ಸಹಕಾರ ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಿ ಎಂದು ಸಲಹೆ ನೀಡಿದರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನರೇಗಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ದುಡಿಯಲಿ ಎಂದರು, ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಡೆ ಹೆಚ್ಚಿನ ಗಮನಹರಿಸಿ ಮಾದರಿ ಪಂಚಾಯತಿಯಾಗಿ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು, ಇದೇ ಸಂದರ್ಭದಲ್ಲಿ ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಜಿ ಆರ್ ಉಮೇಶ್, ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಸೋಮಶೇಖರ್, ಗ್ರಾಮ ಪಂಚಾಯತಿ ಸದಸ್ಯರುಗಳಾದ ನಲ್ಲೂರು ದಿನೇಶ್ ಎನ್.ಕೆ ,ಜಿ.ಆರ್ ಸಂತೋಷ್, ಮಣಿಕಂಠ, ಸಿ.ಎನ್.ಪ್ರಕಾಶ್, ದಿವಾಕರ, ರಾಜೇಶ್,ಶ್ರೀಮತಿ ಎಚ್.ಆರ್ ಶೋಭಾ, ಶ್ರೀಮತಿ ಗಿಡ್ಡಮ್ಮ, ಕುಮಾರ, ಶ್ರೀಮತಿ ಭಾಗ್ಯಮ್ಮ, ಶ್ರೀಕಲಾ, ಶ್ರೀಮತಿ ಎಸ್ ಕೆ ಮಂಜುಳಾ, ಜೆಡಿಎಸ್ ಮುಖಂಡರಾದ ಗನ್ನಿ ಕುಮಾರ್, ಗನ್ನಿ ಶ್ರೀನಿವಾಸ್, ಜಿ ಆರ್ ಯೋಗರಾಜು(ತಮ್ಮಣ್ಣ), ಪ್ರದೀಪ್,ಕುಬೇರ, ತಾರಾನಾಥ್,ಸತೀಶ್,ಕುಮಾರ್, ಪಿಡಿಓ ನವೀನ್, ಬಿಲ್ ಕಲೆಕ್ಟರ್ ಸಂತೋಷ್, ಸೇರಿದಂತೆ ಇತರರು ಹಾಜರಿದ್ದರು.
Tags
ಚನ್ನರಾಯಪಟ್ಟಣ