ಬೆಳ್ಳಂಬೆಳಗ್ಗೆ ಮಹಿಳೆಯ ಮೇಲೆ ದಾಳಿ ನಡೆಸಿದ ಕಾಡಾನೆ.

ಸಕಲೇಶಪುರ : ಕಾಡಾನೆ ಒಂದು ಮನೆಯ ಬಳಿಗೆ ಮಹಿಳೆಯ ಮೇಲೆ ದಾಳಿ ನಡೆಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.


ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡೂರು ಗ್ರಾಮದ ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ (40) ದಾಳಿಗೊಳಗಾದ ಮಹಿಳೆಯಾಗಿದ್ದಾರೆ.

ಕಾಡಾನೆ ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹಾಗು ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

ಸದ್ಯ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ

Post a Comment

Previous Post Next Post