ಹಾಸನ: ಭಾರತೀಯ ಬಾಷಾ ಪತ್ರಿಕೆಗಳ ಒಕ್ಕೂಟ(ಇಲ್ನಾ)ದ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಉದಯರವಿ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನವದೆಹಲಿಯ ಮಹಾರಾಷ್ಟ್ರ ಭವನದಲ್ಲಿ ನಡೆದ ಚುನಾವಣೆಯಲ್ಲಿ ರಾಷ್ಟ್ರಾಧ್ಯಕ್ಷರಾಗಿ ಪ್ರಕಾಶ್ ಪೋಹರೆ ಸೇರಿದಂತೆ ಎಲ್ಲಾ ರಾಜ್ಯಗಳ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ.
ಉದಯರವಿ ಅವರು ಕಳೆದ ಅವಧಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಅದರ ಹಿಂದಿನ ಅವಧಿಯಲ್ಲಿ ರಾಜ್ಯಾಧ್ಯಕ್ಷರಾಗಿದ್ದರು. ಪ್ರಸ್ತುತ ಅವಧಿಗೆ ಪುನಃ ಆಯ್ಕೆಯಾಗಿದ್ದಾರೆ.
Tags
ಹಾಸನ