ಸಕಲೇಶಪುರ :ತಾಲ್ಲೂಕಿನ ಹೆತ್ತೂರು ಗ್ರಾಮದಲ್ಲಿ ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಮರಗಳು ಆನೆ ದಾಳಿಯಿಂದಾಗಿ ನಾಶವಾಗಿವೆ.
ಗ್ರಾಮದ ಚಂದ್ರಶೇಖರ್ ಅವರ ತೋಟದ ಆಜುಬಾಜಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ರಾತ್ರಿ ವೇಳೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡುತ್ತಿವೆ.
ಈ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಅಡಿಕೆ ಗಿಡಗಳನ್ನು ಬೆಳೆದಿದ್ದು ದಿನನಿತ್ಯವೂ ಕಾಡಾನೆಗಳ ದಾಳಿಯಿಂದಾಗಿ ಬೆಳೆ ಹಾನಿಯಾಗುತ್ತಿದ್ದು ರೈತರ ನಿದ್ದೆ ಕೆಡಿಸಿದೆ.
ಆನೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಕಾಡು ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.
Tags
ಸಕಲೇಶಪುರ