ಹಾಸನ:- ಸರ್ಕಾರವು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿದ್ದು ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವಂತೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಆ.29 ರಂದು ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಆವರಣದಲಿ ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ರಾಷ್ಟಿçÃಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಕ್ರೀಡಾ ದಿನಾಚರಣೆ ನಿಮಿತ್ತ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಮರ್ಕುಲಿ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಂಥೋಣಿ, ಬಾಸ್ಕೆಟ್ಬಾಲ್ ತರಬೇತುದಾರರಾದ ಸೋಮಣ್ಣ, ವೈಟ್ ಲಿಫ್ಟಿಂಗ್ ತರಬೇತುದಾರರಾದ ಎ.ವಿ ಮೋಹನ್ ಕುಮಾರ್, ವಿಶೇಷ ಕ್ರೀಡಾಪಟುವಾದ ಕಮಾಲಾಕ್ಷಿ, ಹಿರೀಸಾವೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ಕ್ರೀಡಾಪಟುಗಳಾದ ಕು.ತನ್ಮಯ್ ಕೆ.ಗೌಡ, ಅರಕಲಗೂಡು ಸರ್ಕಾರಿ ಪ್ರೌಢ ಶಾಲೆಯ ವಾಲಿಬಾಲ್ ಕ್ರೀಡಾಪಟುವಾದ ಕು. ಹೇಮಲತಾ, ಹಾಗೂ ಕರಾಟೆ ಮತ್ತು ಕಿಕ್ ಬಾಕ್ಸಿಂಗ್ ಕ್ರೀಡಾಪಟುವಾದ ಕು. ದೇಸಿಹ ಕನಸು ಇವರುಗಳಿಗೆ ಸನ್ಮಾನಿಸಿದರು.
ಈ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್, ಫುಟ್ಬಾಲ್, ಶಟಲ್ ಬ್ಯಾಡ್ಮಿಂಟನ್, ಈಜು ಹಾಗೂ 3ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಬಾಲಕ ಮತ್ತು ಬಾಲಕಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಫಲಕಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿ. ಕೆ. ಹರೀಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಮಹದೇವ್, ತಾಲೂಕು ದೈಹಿಕ ಶಿಕ್ಷಣದ ಶಿಕ್ಷಕರಾದ ವೇದಣ್ಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ಸಿ. ರಘು ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಕ್ರಪಾಣಿ ಇವರುಗಳು ಸೇರಿದಂತೆ ಇಲಾಖಾ ತರಬೇತುದಾರರು ಭಾಗವಹಿಸಿದರು ಹಾಗೂ ಪುಟ್ಬಾಲ್ ತರಬೇತುದಾರಾದ ಕೃಷ್ಣ ಮತ್ತಿತರರು ಉಪಸ್ಥಿತಿರಿದ್ದರು.