ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯು ಮೃತ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಜೆ. ಸುರಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯು ಮೃತಪಟ್ಟ ಘಟನೆ ನಡೆದಿದೆ.
ಮಲ್ಲಿಕಾರ್ಜುನ (58) ಮೃತಪಟ್ಟವರು. ಆ. 13 ರಂದು ಬೈಕ್‌ನಲ್ಲಿ ಜಮೀನಿಗೆ ಗೊಬ್ಬರ ತೆಗೆದುಕೊಂಡು ಹೋಗುತ್ತಿದ್ದಾಗ, ಕಾಡಾನೆ ಯಾಕೇನೋ ಏಕಾಏಕಿ ದಾಳಿ ಮಾಡಿ, ಅವರನ್ನು ಸೊಂಡಿಲಿನಿಂದ ಎಸೆದು, ತುಳಿದಿತು. ಗಾಯಗೊಂಡ ಮಲ್ಲಿಕಾರ್ಜುನ ಅವರನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯುತವಾಗದ ಕಾರಣ, ಅವರು ಆಸ್ಪತ್ರೆಗೆ ಸಲ್ಲದೆ, ಮನೆಗೆ ಕರೆತರಲು ನಿರ್ಧರಿಸಲಾಗಿದೆ.

Post a Comment

Previous Post Next Post